ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 7,165ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 159 ಜನರಲ್ಲಿ ಸೋಂಕು ದೃಢಪಟ್ಟಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಒಂದೇ ದಿನದಲ್ಲಿ 80 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. 1ರಿಂದ 18 ವರ್ಷ ವಯಸ್ಸಿನ 48 ಜನರಲ್ಲಿ ಸೋಂಕು ದೃಢಪಟ್ಟಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಡೆಂಗ್ಯೂ ಸೋಂಕಿಗೆ ಬಲಿಯಾಗಿದ್ದರೆ. ಇನ್ನು ಮೈಸೂರುರಿನಲ್ಲಿ ಇಬ್ಬರು ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ.
ಡೆಂಗ್ಯೂ ಸೋಂಕಿನ ಬಗ್ಗೆ ಜನರು ಮುನ್ನೆಚ್ಚರಿಕೆ ವಹಿಸಿ. ಮನೆ, ಕಚೇರಿ, ಅಂಗಡಿಗಳಲ್ಲಿ ಸ್ವಚ್ಚತೆ ಮುಖ್ಯ. ನಿಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರುವಂತೆ ಜಾಗೃತಿ ವಹಿಸಬೇಕು. ನೀರು ನಿಲ್ಲದಂತೆ ಕ್ರಮ ವಹಿಸುವುದು ಅಗತ್ಯ. ಬೆಳಗಿನ ಸಮಯದಲ್ಲಿ ಕಚ್ಚುವ ಸೊಳ್ಳೆಗಳು ಅಪಾಯಕಾರಿ. ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಮನೆಯ ಕಿಟಕಿಗಳನ್ನು ಮುಚ್ಚಿ, ಸೊಳ್ಳೆ ಬರದಂತೆ ಎಚ್ಚರವಹಿಸಿ.