ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೂ ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಡೆಂಗ್ಯೂ ಪ್ರಕರಣಗಳ ಬಗ್ಗೆ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಎಲ್ಲಾ ಪಾಲಿಕೆಗಳಿಗೂ ತಿಳಿಸಲಾಗಿದೆ. ಮಹಾನಗರ ಪಾಲಿಕೆಗಳು ಫಾಗಿಂಗ್ ಸಿಂಪಡಣೆ, ಸ್ವಚ್ಛತೆ ಕಾಪಾಡಬೇಕು ಎಂದರು.
ಈಗಾಗಲೇ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಿಗೂ ಸೂಚನೆ ನೀಡಲಾಗಿದೆ. ಜನರು ಕೂಡ ಹೆಚ್ಚಿನ ಜಾಗೃತೆ ವಹಿಸುವ ಅಗತ್ಯವಿದೆ ಎಂದು ಹೇಳಿದರು.