alex Certify BREAKING NEWS: ಡೆಂಗ್ಯೂ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಡೆಂಗ್ಯೂ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಇದುವರೆಗೆ 7362 ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ. ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಜನರು ಡೆಂಗ್ಯೂಗೆ ಬಲಿಯಾಗಿದ್ದಾರೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್‌ ಸಜ್ಜುಗೊಳಿಸಬೇಕು. ಮೆಡಿಕಲ್‌ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್‌ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ ಫೋರ್ಸ್‌ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು ಎಂದು ಖಡಕ್ ಸೂಚನೆ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...