ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಕೇಸ್ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಡೆಂಗ್ಯು ಕಳೆದ ವರ್ಷಕ್ಕಿಂತ ಈ ಬಾರಿ ದುಪ್ಪಟ್ಟಾಗಿದೆ. ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ. 6 ಜನ ಮೃತಪಟ್ಟಿದ್ದಾರೆ ಎಂದು ಸಚಿವರು ತಿಳಿಸಿದರು. ಡೆಂಗ್ಯು ಜ್ವರ ಇನ್ನಷ್ಟು ಹೆಚ್ಚಾಗಬಹುದು. ಸೆಪ್ಟಂಬರ್ನಲ್ಲಿ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದು, ಪಾಲಿಕೆ ಡೆಂಗ್ಯೂ ನಿಯಂತ್ರಣಕ್ಕೆ ಸಜ್ಜಾಗಿದೆ. ವಿಶೇಷ ತಂಡ ರಚಿಸಲಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
2023ರಲ್ಲಿ ಜನವರಿಯಿಂದ ಜೂನ್ ವರೆಗೆ 732 ಡೆಂಗ್ಯೂ ಪ್ರಕರಣ ವರದಿಯಾಗಿದ್ದವು. ಆದರೆ ಈಬಾರಿ 1530 ಕೇಸ್ ದಾಖಲಾಗಿ ಆತಂಕ ಹುಟ್ಟಿಸಿದೆ.ಸದ್ಯ ಬೆಂಗಳೂರು 1563, ಚಿಕ್ಕಮಗಳೂರು 491, ಮೈಸೂರು 479, ಹಾವೇರಿ 451, ಚಿತ್ರದುರ್ಗ 265, ದಕ್ಷಿಣ ಕನ್ನಡ 233 ಡೆಂಗ್ಯೂ ಕೇಸ್ ಇದೆ.