ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರದಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಇಬ್ಬರು ಬಲಿಯಾಗಿದ್ದಾರೆ.
80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಬಿಬಿಎಂಪಿ ಪೂರ್ವ ವಲಯದಲ್ಲಿ ಇಬ್ಬರ ಸಾವು ಸಂಭವಿಸಿದೆ. ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ ಎಂದು ಹೇಳಲಾಗಿದೆ.