
ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿದ್ದು, ಮತ್ತಿಬ್ಬರು ಬಾಲಕಿಯರು ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ.
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಪೂರ್ಣಾ ಪಾಟೀಲ(5), ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಲಿಖೀತಾ(9) ಮಹಾಮಾರಿ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಪೂರ್ಣಾ ಅವರನ್ನು ಕುಂದಗೋಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಲಿಖಿತಾರನ್ನು ಶುಕ್ರವಾರ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.