
ಶಿವಮೊಗ್ಗ: ರಾಜ್ಯದಲ್ಲಿ ಮಹಾಮರಿ ಡೆಂಘೀ ಜ್ವರ ಆರ್ಭಟಿಸುತ್ತಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಹೊತ್ತಲ್ಲಿ ಝೀಕಾ ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ.
ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜೂನ್ 19ರಂದು ತೀವ್ರ ಜ್ವರದಿಂದ ಅವರು ಬಳಲುತ್ತಿದ್ದ ಅವರು ಅವರಿಗೆ ಜೂನ್ 21 ರಂದು ಝೀಕಾರ ವೈರಸ್ ಪತ್ತೆಯಾಗಿತ್ತು.
ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಡಿಸ್ಚಾರ್ಜ್ ಆಗಿದ್ದರು. ಗುರುವಾರ ಕುಟುಂಬದವರು ಅವರನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ನಿನ್ನೆ ಶಿವಮೊಗ್ಗದಲ್ಲಿ ಗಾಂಧಿನಗರದ ಮನೆಯಲ್ಲಿಯೇ ಮೃತಪಟ್ಟಿದ್ದಾರೆ.