ಬಾಗಲಕೋಟೆ: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಬಾಗಲಕೋಟೆ ಜಿಲ್ಲೆಯಲ್ಲಿ ಮಹಾಮಾರಿ ಡೆಂಘಿ ಸೋಂಕಿಗೆ ಜಿಲ್ಲೆಯ ಜನರು ತತ್ತರಿಸಿದ್ದಾರೆ. 36 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ 50 ಜನರಲ್ಲಿ ಡೆಂಘೀ ಪಾಸಿಟಿವ್ ಬಂದಿದ್ದು, ಅವರಲ್ಲಿ 36 ಮಕ್ಕಳಿಗೆ ಡೆಂಘೀ ದೃಢಪಟ್ಟಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು 2ರಿಂದ 16 ವರ್ಷ ವಯಸ್ಸಿನ ಮಕ್ಕಳಲ್ಲಿ ಡೆಂಘೀ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾಡಳಿತ ಹಾಗೂ ಜಿಲ್ಲಾಸ್ಪತ್ರೆ ಮಕ್ಕಳಿಗಾಗಿಯೇ ಪ್ರತ್ಯೇಕ ಎರಡು ವಾರ್ಡ್ ಗಳನ್ನು ತೆರೆದು ಚಿಕಿತ್ಸೆ ನೀಡುತ್ತೇವೆ.
ಕಳೆದ ಜೂನ್ ತಿಂಗಳಲ್ಲಿ ಜಿಲ್ಲೆಯಲ್ಲಿ 70 ಜನರಲ್ಲಿ ಡೆಂಘೀ ಪಾಸಿಟಿವ್ ಬಂದಿತ್ತು. ಚಿಕಿತ್ಸೆ ಬಳಿಕ ಎಲ್ಲರೂ ಗುಣಮುಖರಾಗಿದ್ದರು. ಇದೀಗ 50 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 36 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ.