ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಭೀತಿ ಹಿನ್ನೆಲೆ ಗ್ರಾಮ ಪಂಚಾಯತ್ ಕಾರ್ಯಪಡೆ(GPTF) ಸದಸ್ಯರಿಗೆ ಸರ್ಕಾರ You Tube ಆಧಾರಿತ ತರಬೇತಿ ಆಯೋಜನೆ ಮಾಡಿದೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳು ಹರಡುವುದನ್ನು ತಡೆಗಟ್ಟಲು ಗ್ರಾಮ ಪಂಚಾಯಿತಿಗಳು ಸೂಕ್ತ ಮುನ್ನಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿರುತ್ತದೆ. ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಉಲ್ಲೇಖದ ಪತ್ರದಲ್ಲಿ ಈಗಾಗಲೇ ತಿಳಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯಪಡೆಯ(GPTF) ಎಲ್ಲಾ ಸದಸ್ಯರಿಗೆ ದಿನಾಂಕ:16-07-2024 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ You Tube ತರಬೇತಿಯನ್ನು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶನದ ಮೇರೆಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (ANSSIRD&PR) ಮೈಸೂರುಯಿಂದ ಆಯೋಜಿಸಲಾಗಿದೆ. You Tube ಲಿಂಕ್ ನ್ನು ಇದರೊಂದಿಗೆ ಲಗತ್ತಿಸಿದ್ದು, ಸದರಿ ತರಬೇತಿಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ, ಗ್ರಾಮ ಪಂಚಾಯಿತಿ ಕಾರ್ಯಪಡೆಯ(GPTF) ಎಲ್ಲಾ ಸದಸ್ಯರು- ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮುಖ್ಯೋಪಾಧ್ಯಾಯರು ಹೀಗೆ ಎಲ್ಲಾ ಸದಸ್ಯರು ತಪ್ಪದೇ ಹಾಜರಾಗುವಂತೆ ತಿಳಿಸಲು ಕೋರಿದೆ.