alex Certify ರಾಜ್ಯದಲ್ಲಿ ಡೆಂಘೀ ಜ್ವರ ಉಲ್ಬಣ: ಒಂದೇ ದಿನ 435 ಕೇಸ್ ದಾಖಲು, ಒಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಡೆಂಘೀ ಜ್ವರ ಉಲ್ಬಣ: ಒಂದೇ ದಿನ 435 ಕೇಸ್ ದಾಖಲು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಕೇಸ್ ಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆ ಅವಧಿಯಲ್ಲಿ 435 ಡೆಂಘೀ ಕೇಸ್ ಗಳು ವರದಿಯಾಗಿವೆ.

ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆಯಲ್ಲಿ 365 ಡೆಂಘೀ ಕೇಸುಗಳು ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು 65 ಡೆಂಘೀ ಕೇಸ್ ಸಕ್ರಿಯವಾಗಿದ್ದು, ಇಂದು ಡೆಂಘೀ ಜ್ವರದಿಂದ ಒಬ್ಬರು ಮೃತಪಟ್ಟಿದ್ದಾರೆ. ಡೆಂಘೀ ಪ್ರಕರಣಗಳ ಸಂಖ್ಯೆ 9962ಕ್ಕೆ ಏರಿಕೆಯಾಗಿದೆ.

ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೊರೋನಾ ಮಾದರಿಯಲ್ಲಿಯೇ ಡೆಂಘೀ ತಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. ವಿಶೇಷ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಒಂದೇ ಕಡೆ ಎರಡು ಮೂರು ಕೇಸ್ ಗಳು ಪತ್ತೆಯಾದರೆ ಹಾಟ್ ಸ್ಪಾಟ್ ಎಂದು ಗುರುತಿಸಲಾಗುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...