ಭೋಪಾಲ್: ಮದ್ಯಪಾನ ಮಾಡಲು ಹಣ ಕೇಳಿದ್ದಕ್ಕೆ ತಾಯಿ ನಿರಾಕರಿಸಿದ್ದರಿಂದ 44 ವರ್ಷದ ವ್ಯಕ್ತಿ 3ನೇ ಮಹಡಿಯಿಂದ ಕೆಳಗೆ ಹಾರಿ ಮೃತಪಟ್ಟಿರುವ ಘಟನೆ ಅಯೋಧ್ಯಾ ನಗರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಆಟೋಚಾಲಕ ಶಿವನಗರ ನಿವಾಸಿ ಶ್ರೀವಾಸ್ತವ(44) ಎಂದು ಗುರುತಿಸಲಾಗಿದೆ. ತಾಯಿ ಹಾಗೂ ಹಿರಿಯ ಸಹೋದರನೊಂದಿಗೆ ಅಯೋಧ್ಯೆ ನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದ. ಮದ್ಯಪಾನದ ಚಟಕ್ಕೆ ಬಿದ್ದ ಈತ ತಾಯಿ ಜತೆ ಹಣಕ್ಕಾಗಿ ಪೀಡಿಸಿದ್ದಾನೆ. ಅವರು ಹಣ ಕೊಡಲು ನಿರಾಕರಿಸಿದ್ದಕ್ಕೆ 3ನೇ ಮಹಡಿಯ ಬಾಲ್ಕನಿಯಿಂದ ಹಾರಿ ಕೆಳಗೆ ಬಿದ್ದಿದ್ದಾನೆ.
ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಿದ ಲೇಡಿ ಪೊಲೀಸ್
ಗಂಭೀರ ಗಾಯಗೊಂಡಿದ್ದ ಈತನನ್ನು ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ, ಈ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಅಯೋಧ್ಯ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.