ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ 5 ಮಿ.ಮೀ ಸಾಧಾರಣ ಮಳೆಯಾಗುವ ಸಾದ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಾಹಿತಿ ನೀಡಿದೆ.
ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೈತರು ಕಟಾವಾದ ಬೆಳೆಯನ್ನು ಮಳೆಯಲ್ಲಿ ನೆನೆಯದಂತೆ ಟಾರ್ಪಲಿನ್ ಹೊದಿಕೆಯಿಂದ ಸಂರಕ್ಷಿಸಿಕೊಳ್ಳಬೇಕು ಹಾಗೂ ಒಂದು ವೇಳೆ ರಾಗಿ ಬೆಳೆ ಕಟಾವು ಮಾಡದೇ ಇರುವ ಸಂದರ್ಭದಲ್ಲಿ ಈ ದಿನಗಳಲ್ಲಿ ಕೊಯ್ಲು ಮಾಡಲು ಸೂಕ್ತವಿರುವುದಿಲ್ಲ, ಆದ್ದರಿಂದ ಮಳೆ ಪ್ರಮಾಣ ಕಡಿಮೆಯಾದ ಮೇಲೆ ರಾಗಿ ಕಟಾವು ಮಾಡಬೇಕು ಎಂದು ಕೃಷಿ ಇಲಾಖೆ ತಿಳಿಸಿದೆ.