alex Certify ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಕೇಂದ್ರ ಸ್ಥಾನ ವಸತಿಗೃಹದಲ್ಲಿ ವಾಸ್ತವ್ಯ ಕಡ್ಡಾಯ: ಆರೋಗ್ಯ ಇಲಾಖೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಕೇಂದ್ರ ಸ್ಥಾನ ವಸತಿಗೃಹದಲ್ಲಿ ವಾಸ್ತವ್ಯ ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ವೈದ್ಯರು ಮತ್ತು ಇತರೆ ಆರೋಗ್ಯ ಸಿಬ್ಬಂದಿ ಸರ್ಕಾರದಿಂದ ನೀಡಿದ ವಸತಿಗೃಹ ಅಥವಾ ಕೇಂದ್ರ ಸ್ಥಾನದಲ್ಲಿ ವಾಸ್ತವ ಹೂಡುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ವಿವಿಧ ಆರೋಗ್ಯ ಕಾರ್ಯಕ್ರಮ, ತುರ್ತು ಸೇವೆಗಳನ್ನು ಸಕಾಲದಲ್ಲಿ ಒದಗಿಸಲು ವೈದ್ಯರು ಮತ್ತು ಸಿಬ್ಬಂದಿಗೆ ವಸತಿಗೃಹ ಸೌಲಭ್ಯ ಕಲ್ಪಿಸಲಾಗಿದೆ. ವಸತಿಗೃಹ ಇಲ್ಲದವರಿಗೆ ಕೇಂದ್ರ ಸ್ಥಾನದಲ್ಲಿ ವಾಸಿಸಲು HRA ಸೌಲಭ್ಯ ನೀಡಲಾಗಿದೆ. ಆದರೆ, ವೈದ್ಯರು ಮತ್ತು ಸಿಬ್ಬಂದಿಗೆ ಒದಗಿಸಿದ ನಿಯೋಜಿತ ವಸತಿಗೃಹಗಳಲ್ಲಿ ವಾಸ್ತವ್ಯವಿರದೆ ಕಟ್ಟಡಗಳು ಶಿಥಿಲಗೊಂಡು ದುರಸ್ತಿ ಮಾಡದಷ್ಟು ಹಾಳಾಗುತ್ತಿದೆ. ಇದು ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡುತ್ತಿದೆ.

ಆರೋಗ್ಯ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದರೂ, ವೈದ್ಯರು ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿ ವಾಸವಿಲ್ಲದ ಕಾರಣ ಸಾರ್ವಜನಿಕರಿಗೆ ಸಕಾಲದಲ್ಲಿ ವೈದ್ಯಕೀಯ ಸೇವೆ ಸಿಗದಂತಾಗಿದೆ. ಇದರಿಂದ ಸಾವು ನೋವು ಸಂಭವಿಸುತ್ತಿರುವ ಬಗ್ಗೆ ಮಾಧ್ಯಮಗಳ ವರದಿ ಮತ್ತು ಸಾರ್ವಜನಿಕರು, ಜನಪ್ರತಿನಿಧಿಗಳ ದೂರಿನ ಅನ್ವಯ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ಪ್ರಕಾರ ಪ್ರತಿ ಸರ್ಕಾರಿ ನೌಕರರು ತಮ್ಮ ಕರ್ತವ್ಯ ನಿರ್ವಹಣೆಗೆ ಸರ್ಕಾರ ನೀಡಿರುವ ಸೌಲಭ್ಯವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ಕೇಂದ್ರ ಸ್ಥಾನದಲ್ಲಿ ಇರಬೇಕು. ನೌಕರರು ನಿಯಮ ಉಲ್ಲಂಘಿಸಿದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...