alex Certify ಎಲ್ಲಾ ವಿವಿ ಪದವಿ ಪರೀಕ್ಷೆ 1 ತಿಂಗಳು ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ವಿವಿ ಪದವಿ ಪರೀಕ್ಷೆ 1 ತಿಂಗಳು ಮುಂದೂಡಿಕೆ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ ಕುಲಸಚಿವರಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು.

ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...