BIG NEWS: RTI ಕಾರ್ಯಕರ್ತರ ಬಗ್ಗೆ ಮಾಹಿತಿ ಕೇಳಿದ್ದ ಸುತ್ತೋಲೆ ಹಿಂಪಡೆದ ಸರ್ಕಾರ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ(RTI) ಅಡಿಯಲ್ಲಿ ಮಾಹಿತಿ ಕೋರಿ ಮೂರು ತಿಂಗಳ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿ ಸಲ್ಲಿಸಿದವರ ವಿವರ ಸಂಗ್ರಹಿಸಿ ಕಳುಹಿಸುವಂತೆ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ನೀಡಿದ ಸುತ್ತೋಲೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಿಂಪಡೆದುಕೊಂಡಿದೆ.

2023ರ ಏಪ್ರಿಲ್ 10 ರಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠ ನೀಡಿದ್ದ ಆದೇಶ ಆಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೆಪ್ಟೆಂಬರ್ 6ರಂದು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಪತ್ರದ ಮೂಲಕ ಈ ಕುರಿತಾಗಿ ಸೂಚನೆ ನೀಡಿತ್ತು.

ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ 3 ತಿಂಗಳ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿ ಸಲ್ಲಿಸಿದ ವ್ಯಕ್ತಿಗಳ ಮಾಹಿತಿಯನ್ನು ಸೆಪ್ಟಂಬರ್ 20ರೊಳಗೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ಸೆಪ್ಟೆಂಬರ್ 6ರ ಪತ್ರವನ್ನು ಹಿಂಪಡೆದುಕೊಂಡು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೌನೀಷ್ ಮೌದ್ಗಿಲ್ ಪತ್ರ ಬರೆದಿದ್ದಾರೆ.

ಇಲಾಖೆಯ ಮಾಹಿತಿ ಹಕ್ಕು ವಿಭಾಗದ ಅಧೀನ ಕಾರ್ಯದರ್ಶಿಯು ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆ ಅಥವಾ ಗಮನಕ್ಕೆ ತಾರದೆ ಪತ್ರವನ್ನು ಬರೆದಿದ್ದರು. ಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ನಾಗರೀಕರು ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯಲು ಶಾಸನಬದ್ಧ ಅಧಿಕಾರವಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದವರ ಕುರಿತ ಮಾಹಿತಿಯನ್ನು ಬೇರೆಯವರು ಪಡೆಯಲು ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ. ಸರ್ಕಾರ ಆರ್‌ಟಿಐ ಕಾರ್ಯಕರ್ತರ ಮಾಹಿತಿ ಕೇಳಿದ್ದು, ವಿವಾದಕ್ಕೆ ಕಾರಣವಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read