ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅನುಮೋದನೆಗೊಂಡಿರುವ 262 ನರ್ಸರಿ ಆರಂಭಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಉಪ ಯೋಜನಾ ಸಮನ್ವಯಾಧಿಕಾರಿಗಳಿಗೆ ಶಿಕ್ಷಣ ಇಲಾಖೆಯಿಂದ ಈ ಕುರಿತು ಸೂಚನೆ ನೀಡಲಾಗಗಿದೆ. ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶಕರು, ಅನುದಾನ ಬಿಡುಗಡೆಯಾದ ನಂತರ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭಿಸಲು ನಿರ್ದೇಶನ ನೀಡಿದ್ದಾರೆ.
2023- 24ನೇ ಸಾಲಿನ ವಾರ್ಷಿಕ ಯೋಜನಾ ಮಂಡಳಿಯಲ್ಲಿ 300 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ಆರಂಭಿಸಲು ಯೋಜಿಸಲಾಗಿತ್ತು. ಇವುಗಳಲ್ಲಿ 2062 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ಆರಂಭಿಸಲು ಏಪ್ರಿಲ್ 17ರ ನಡಾವಳಿಯಲ್ಲಿ ಅನುಮೋದನೆಯಾಗಿದೆ. ಈ ನಿಟ್ಟಿನಲ್ಲಿ 262 ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಪೂರ್ವಸಿದ್ಧತೆ ಮಾಡಿಕೊಳ್ಳಲು ತಿಳಿಸಲಾಗಿದೆ.