
ಬೆಂಗಳೂರು: ಠೇವಣಿದಾರರ ಹಿತರಕ್ಷಣೆ ಕಾಯ್ದೆಗೆ ಸರ್ಕಾರ ಬಲ ನೀಡಿದೆ. ಖಾಸಗಿ ಹಣಕಾಸು ಸಂಸ್ಥೆಗಳು ಠೇವಣಿದಾರರ ಹಿತಕಾಯಲು ಕ್ರಮ ಕೈಗೊಳ್ಳಲಾಗಿದೆ.
ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ವಂಚಿಸಿದರೆ ಜಾಮೀನು ರಹಿತ ಅಪರಾಧವಾಗಲಿದೆ. ಇತ್ತೀಚೆಗೆ ಇಂತಹ ವಂಚನೆ ಪ್ರಕರಣಗಳು ಹೆಚ್ಚಳವಾಗಿದ್ದು, ಕಠಿಣ ಕಾಯ್ದೆ ತರಬೇಕೆಂದು ಗ್ರಾಹಕರು ಒತ್ತಾಯಿಸಿದ್ದರು. ಗ್ರಾಹಕರ ಹಿತಾಸಕ್ತಿ ಕಾಪಾಡಲು ಸರ್ಕಾರ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ(ತಿದ್ದುಪಡಿ) ವಿಧೇಯಕ- 2022 ಅನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಅಂಗೀಕರಿಸಿತ್ತು.
ಈ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಗೆಜೆಟ್ ನಲ್ಲಿ ಪ್ರಕಟವಾಗಿದೆ. 2022ರ ಮೇ 4ರಿಂದ ಅನ್ವಯವಾಗುವಂತೆ ಕಾಯ್ದೆ ಜಾರಿಗೆ ಬಂದಿದ್ದು, ಈ ಮೂಲಕ ಠೇವಣಿದಾರರ ಹಿತರಕ್ಷಣೆ ಕಾಯ್ದೆಗೆ ಬಲ ಸಿಕ್ಕಿದೆ.