alex Certify ಬಯಲು ಸೀಮೆ ಜನರಿಗೆ ಗುಡ್ ನ್ಯೂಸ್: ಭದ್ರಾ ಮೇಲ್ದಂಡೆ ಯೋಜನೆ 2028ರ ಮಾರ್ಚ್ ಅಂತ್ಯಕ್ಕೆ ಪೂರ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಯಲು ಸೀಮೆ ಜನರಿಗೆ ಗುಡ್ ನ್ಯೂಸ್: ಭದ್ರಾ ಮೇಲ್ದಂಡೆ ಯೋಜನೆ 2028ರ ಮಾರ್ಚ್ ಅಂತ್ಯಕ್ಕೆ ಪೂರ್ಣ

ಬೆಳಗಾವಿ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಮಾರ್ಚ್-2028ರ ಅಂತ್ಯಕ್ಕೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಕೇಳಿದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯ ಪ್ರಗತಿಯ ಕುರಿತು ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ಮಧ್ಯ ಕರ್ನಾಟಕದ ಬರಪೀಡಿತ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿನ 2,25,515 ಹೆಕ್ಟೇರ್(5,57,022 ಎಕರೆ) ಭೂ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಪದ್ಧತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ 367 ಕೆರೆಗಳಿಗೆ ಅವುಗಳ ಸಾಮಾಥ್ರ್ಯದ ಶೇ.50ರಷ್ಟು ನೀರನ್ನು ತುಂಬಿಸಲು ಉದ್ದೇಶಿಸಿ ರೂಪಿಸಲಾಗಿದೆ. ಈ ಯೋಜನೆಗೆ 29.90 ಟಿಎಂಸಿ ನೀರನ್ನು(ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಲು 21.90 ಟಿಎಂಸಿ, ಕೆರೆ ತುಂಬಿಸಲು 6 ಟಿಎಂಸಿ, ವಾಣಿ ವಿಲಾಸ ಸಾಗರಕ್ಕೆ 2 ಟಿಎಂಸಿ) ಹಂಚಿಕೆ ಮಾಡಲಾಗಿದೆ. ಈ ಯೋಜನೆಯ ರೂ.21,473.67 ಕೋಟಿ ಮೊತ್ತದ ಸಮಗ್ರ ಪುನರ್ ಪರಿಷ್ಕೃತ ಯೋಜನಾ ವರಿಗೆ 2020ರ ಡಿಸೆಂಬರ್ 16ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ಅವಶ್ಯವಿರುವ ಜಮೀನಿನ ಭೂಸ್ವಾಧೀನದ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಿಂದ 2023-24ನೇ ಸಾಲಿನ ಅಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿರುತ್ತದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಯೋಜನೆಯನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸುವ ಉದ್ದೇಶದಿಂದ 5,300 ಕೋಟಿ ರೂ. ಧನ ಸಹಾಯವನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ-ವೇಗವರ್ಧಿತ ನೀರಾವರಿ ಪ್ರಯೋಜನ ಕಾರ್ಯಕ್ರಮ ಯೋಜನೆ/ರಾಷ್ಟ್ರೀಯ ಯೋಜನೆಯಡಿ ಅಡಿ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ನಿರೀಕ್ಷಿಸಲಾಗಿದೆ.

ಆರ್ಥಿಕ ಪ್ರಗತಿ:

ಭದ್ರಾ ಮೇಲ್ದಂಡೆ ಯೋಜನೆಗಾಗಿ 2024-25ನೇ ಸಾಲಿನಲ್ಲಿ 1430 ಕೋಟಿ ರೂ. ಅನುದಾನ ಹಂಚಿಕೆಯಾಗಿದ್ದು, 2024ರ ಅಕ್ಟೋಬರ್ ಅಂತ್ಯಕ್ಕೆ ಒಟ್ಟಾರೆ ಸಂಚಿತ 10,115.13 ಕೋಟಿ ರೂ. ಆರ್ಥಿಕ ಪ್ರಗತಿ ಸಾಧಿಸಲಾಗಿದೆ.

ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರಕ್ಕೆ ಶಿಫಾರಸ್ಸು:

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಶಿಫಾರಸ್ಸು ಮಾಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯು ತಾಂತ್ರಿಕವಾಗಿ ಹಾಗೂ ಆರ್ಥಿಕವಾಗಿ ಕಾರ್ಯಸಾಧ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ತಾಂತ್ರಿಕ ಸಲಹಾ ಸಮಿತಿಯು ತೀರುವಳಿ ನೀಡಿರುತ್ತದೆ. ಕೇಂದ್ರದ ಇನ್‍ವೆಸ್ಟ್‍ಮೆಂಟ್ ಕ್ಲಿಯರೆನ್ಸ್ ಸಮಿತಿಯು 16,125.48 ಕೋಟಿ ರೂ. ಯೋಜನಾ ಮೊತ್ತಕ್ಕೆ ಸ್ಥಿರೀಕರಿಸಿ ಅನುಮೋದನೆ ನೀಡಿದೆ. 2022ರ ಫೆ.15ರ ಕೇಂದ್ರದ ಹೈ ಪವರ್ಡ್ ಸ್ಟ್ರೀಂಗ್ ಕಮಿಟಿಯ 14ನೇ ಸಭೆಯು ಮಾಡಿದ ಶಿಫಾರಸ್ಸಿನಂತೆ ಕೇಂದ್ರ ಹಣಕಾಸು ಸಚಿವಾಲಯದ ಪಬ್ಲಿಕ್ ಇನ್‍ವೆಸ್ಟ್‍ಮೆಂಟ್ ಬೋರ್ಡ್ ಮಂಡಳಿಯು ಪ್ರಸ್ತಾವನೆ ಅಂಗೀಕರಿಸಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗೆ ಶಿಫಾರಸ್ಸು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...