ಬೆಂಗಳೂರು : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಿರಣ್ ಗುತ್ತಿಗೆ ಆಧಾರದಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕರಾಗಿದ್ದರು. ಗಣಿ ಅಧಿಕಾರಿ ಪ್ರತಿಮಾ ಹತ್ಯೆ ಬಳಿಕ ಕಿರಣ್ ಎಸ್ಕೇಪ್ ಆಗಿದ್ದನು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಮಾ ಮೊಬೈಲ್ ವಶಕ್ಕೆ ಪಡೆದಿರುವ ಸುಬ್ರಹ್ಮಣ್ಯಪುರ ಪೊಲೀಸರು ಪರಿಶೀಲನೆಗೆ ನಡೆಸುತ್ತಿದ್ದಾರೆ. ಹಾಗೂ ಪ್ರತಿಮಾ ಮನೆ ಸುತ್ತ ಇರುವ ಸಿಸಿಟಿವಿಯನ್ನು ಕೂಡ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ (45) ಅವರನ್ನು ದುಷ್ಕರ್ಮಿಗಳು ಬೆಂಗಳೂರಿನ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ ಮೆಂಟ್ ನಿವಾಸದಲ್ಲಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಮೊದಲು ಅಧಿಕಾರಿಯ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿದ್ದು, ಬಳಿಕ ಚಾಕುವಿನಿಂದ ಕತ್ತನ್ನು ಸೀಳಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.