ಹತ್ಯೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ ಅಪರಾಧಿಯಾಗಿ ಘೋಷಿಸಲ್ಪಟ್ಟಿದ್ದ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರಿಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.
ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂ ಸಿಂಗ್ ಹಾಗೂ ಇತರೆ ಐವರನ್ನು 2021 ರಲ್ಲಿ ಪಂಚಕುಲದ ಸಿಬಿಐ ನ್ಯಾಯಾಲಯ, ಅಪರಾಧಿಗಳೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ಹಾಗೂ 31 ಲಕ್ಷ ರೂಪಾಯಿ ದಂಡವನ್ನು ಪಾವತಿಸುವಂತೆ ಸೂಚಿಸಿತ್ತು.
ಇದನ್ನು ಪ್ರಶ್ನಿಸಿ ರಾಮ್ ರಹೀಮ್ ಸಿಂಗ್ ಮತ್ತು ಇತರರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತ ತೀರ್ಪು ಇಂದು ಹೊರ ಬಿದ್ದಿದೆ. ಪಂಚಕುಲ ಸಿಬಿಐ ನ್ಯಾಯಾಲಯದ ಜೀವಾವಧಿ ಶಿಕ್ಷೆಯ ಆದೇಶವನ್ನು ತಳ್ಳಿ ಹಾಕಿರುವ ಹೈಕೋರ್ಟ್, ಗುರ್ಮೀತ್ ರಾಮ್ ರಹಿಂ ಸಿಂಗ್ ಮತ್ತು ಇತರ ಇವರನ್ನು ನಿರ್ದೋಷಿಗಳೆಂದು ಘೋಷಿಸಿ ತೀರ್ಪು ನೀಡಿದೆ.