ಬೆಂಗಳೂರು : ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ನಗರದ ಪೊಲೀಸ್ ಕಮಿಷನರ್ಗೆ ಡಿಸಿಪಿ ಮುತ್ತುರಾಜ್ ಮೂಲಕ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಲಿಖಿತ ದೂರು ನೀಡಿದ್ದಾರೆ. ಅನಂತ ಕುಮಾರ್ ಹೆಗಡೆ ಕೋಮು ಸಂಘರ್ಷಕ್ಕೆ ಪ್ರಚೋದಿಸುತ್ತಿದ್ದಾರೆ. ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಲವು ಕಡೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಅನಂತಕುಮಾರ ಹೆಗಡೆ ಬಂಧಿಸುವಂತೆ ಆಗ್ರಹಿಸಿದ್ದಾರೆ.ಜನವರಿ 13 ರಂದು ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ ‘ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಏಕವಚನದಲ್ಲಿ ವಾಗ್ಧಾಳಿ ನಡೆಸಿದ್ದರು. ಕಾಂಗ್ರೆಸ್ ನಮ್ಮ ವಿರೋಧಿ ಅಲ್ವೆ ಅಲ್ಲ.ಹಿಂದೂ ವಿರೋಧಿಗಳು, ಸನಾತನ ಧರ್ಮ ವಿರೋಧಿಗಳು ನಮ್ಮ ವಿರೋಧಿಗಳು, ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ, ಸಿದ್ದರಾಮಯ್ಯ ನಮ್ಮ ವಿರೋಧಿ ಎಂದಿದ್ದರು.