alex Certify ‘ದೇಸಾಯಿ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ದೇಸಾಯಿ’ ಚಿತ್ರದ ಟ್ರೈಲರ್ ರಿಲೀಸ್

ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ಪ್ರವೀಣ್ ಕುಮಾರ್ ಅಭಿನಯದ ‘ದೇಸಾಯಿ’ ಚಿತ್ರದ  ಟ್ರೈಲರನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವುದಲ್ಲದೆ  ನೋಡುಗರ ಗಮನ ಸೆಳೆದಿದೆ.

ನಾಗಿರೆಡ್ಡಿ ನಿರ್ದೇಶನದ ಈ ಚಿತ್ರದಲ್ಲಿ ಪ್ರವೀಣ್ ಕುಮಾರ್ ಹಾಗೂ ರಾಧ್ಯ ಪ್ರಮುಖ ಪಾತ್ರದಲ್ಲಿದ್ದು, ಹರಿಣಿ, ಪ್ರಶಾಂತ್, ಸೀತಾ ಬೆನಕ, ಆರತಿ ಕುಲಕರ್ಣಿ, ಮಂಜುನಾಥ್ ಹೆಗಡೆ, ಸೃಷ್ಟಿ, ಒರಟ ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ ಉಳಿದ ಪಾತ್ರವರ್ಗದಲ್ಲಿದ್ದಾರೆ.

ಶ್ರೀ ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಬ್ಯಾನರ್ ನಲ್ಲಿ ಮಹಾಂತೇಶ ವಿ.ಚೋಳಚಗುಡ್ಡ ನಿರ್ಮಾಣ ಮಾಡಿದ್ದಾರೆ. ಸಾಯ್ ಕಾರ್ತಿಕ್ ಸಂಗೀತ ಸಂಯೋಜನೆ  ನೀಡಿದ್ದು, ಪಿ.ಕೆ.ಹೆಚ್. ದಾಸ್ ಅವರ ಛಾಯಾಗ್ರಾಹಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...