ಶಿವಮೊಗ್ಗ: ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಶಾಲೆಗಳಿಗೂ ಡೆಸ್ಕ್ ಪೂರೈಸಲಾಗುವುದು. ಯಾವುದೇ ಮಕ್ಕಳು ನೆಲದ ಮೇಲೆ ಕುಳಿತುಕೊಳ್ಳಬೇಕಿಲ್ಲ. ಇದು ಸರ್ಕಾರದ ಆದೇಶವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನ, ಅನುದಾನ ರಹಿತ ಶಾಲೆಗಳಲ್ಲಿ ಒಂದರಿಂದ 10ನೇ ತರಗತಿವರೆಗಿನ ಯಾವ ಮಕ್ಕಳು ಕೂಡ ನೆಲದ ಮೇಲೆ ಕುಳಿತುಕೊಂಡು ಪಾಠ ಕೇಳುವಂತಿಲ್ಲ. ಇದು ಸರ್ಕಾರಿ ಆದೇಶವಾಗಲಿದೆ. ಮುಂದಿನ ವರ್ಷದಿಂದ ಎಲ್ಲಾ ಶಾಲೆಗಳಿಗೂ ಡೆಸ್ಕ್ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಶಾಲಾ ಮಕ್ಕಳಿಂದ ಕೆಲಸ ಮಾಡಿಸುವುದು ಅಪರಾಧ. ಮಕ್ಕಳ ಕೈಯಲ್ಲಿ ಕೆಲಸ ಮಾಡಿಸುವುದು ಕಂಡು ಬಂದರೆ ದೂರು ದಾಖಲಿಸಲು ಸೂಚಿಸಲಾಗಿದೆ. ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯಕ್ಕಾಗಿ ಹಿಂದಿನ ಸರ್ಕಾರ ನೀಡಿದ್ದಕ್ಕಿಂತ ಎರಡು ಪಟ್ಟು ಹಣ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.