ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಜಂಟಿ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರನ್ನು ಜಯ್ ಶಾ ಅವರ ನಿರ್ಗಮನದ ನಂತರ ಭಾರತೀಯ ಮಂಡಳಿಯ ಹಂಗಾಮಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಖಾಯಂ ಕಾರ್ಯದರ್ಶಿಯನ್ನು ನೇಮಿಸುವವರೆಗೆ ಮಂಡಳಿಯ ಅಧ್ಯಕ್ಷ ರೋಜರ್ ಬಿನ್ನಿ ಅವರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ಬಳಸಿಕೊಂಡು ಬಿಸಿಸಿಐನ ನಿಯಮಗಳು ಮತ್ತು ನಿಬಂಧನೆಗಳ ಅಡಿಯಲ್ಲಿ ಸೈಕಿಯಾ ಅವರನ್ನು ಮಧ್ಯಂತರ ಅವಧಿಗೆ ಹಂಗಾಮಿ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ.
ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ ಮತ್ತು ರಾಜ್ಯದ ಅಡ್ವೊಕೇಟ್ ಜನರಲ್ ಆಗಿರುವ ಸೈಕಿಯಾ ಅವರಿಗೆ ಕಾರ್ಯದರ್ಶಿ ಅಧಿಕಾರವನ್ನು ಹಸ್ತಾಂತರಿಸಲು ಸೂಚಿಸಿದ್ದಾರೆ. ಅವರು ಮುಂದಿನ ವರ್ಷ ಸೆಪ್ಟೆಂಬರ್‌ವರೆಗೆ ಈ ಹುದ್ದೆಯಲ್ಲಿ ಮುಂದುವರಿಯುವ ನಿರೀಕ್ಷೆಯಿದೆ. ನಂತರ ಖಾಲಿ ಹುದ್ದೆಗೆ ಖಾಯಂ ಕಾರ್ಯದರ್ಶಿ ನೇಮಕ ಮಾಡಲಾಗುವುದು ಎನ್ನಲಾಗಿದೆ.