ಬೆಂಗಳೂರು: ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.
ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಹೀಗಾಗಿ ನೆರೆ ಜಿಲ್ಲೆಯ ಹಾಗೂ ವೈಯಕ್ತಿಕ ವರ್ಚಸ್ಸು ಮತ್ತು ಸಮುದಾಯದ ಮತ ಹೊಂದಿರುವ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಅವರಿಗೆ ದೇವನಹಳ್ಳಿಯಿಂದ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.
ಕಾಂಗ್ರೆಸ್ ಹೈಕಮಾಂಡ್ ಕೂಡ ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧಿಸಲು ಸ್ಪಂದಿಸಿದೆ. ಈ ಹಿನ್ನಲೆಯಲ್ಲಿ ಮುನಿಯಪ್ಪ ಅವರು ದೇವನಹಳ್ಳಿಯಿಂದ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಕೆ.ಹೆಚ್. ಮುನಿಯಪ್ಪ ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.