alex Certify ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು, ಈಗೇನು ಹೇಳ್ತಾರೆ : ಸಿಎಂ ಸಿದ್ದರಾಮಯ್ಯ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು, ಈಗೇನು ಹೇಳ್ತಾರೆ : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು, ಈಗೇನು ಹೇಳ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ಮಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದಿದ್ದಾರೆ.

ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ  150 ಮಾನವ ದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ, 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ ಎಂದರು.

ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬಿಜೆಪಿ ಜೊತೆ ಸೇರಿದ್ದಾರೆ. ಇದೇ ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು, ಈಗೇನು ಹೆಳುತ್ತಿದ್ದಾರೆ. ಅವರು ಯಜಮಾನರು,  ಮಾಜಿ ಪ್ರಧಾನಿಗಳಾಗಿದ್ದವರು ಹೀಗೆ ಹೇಳಬಾರದು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರು ಕರ್ನಾಟಕಕ್ಕೆ ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು ಎಂದು ತಿಳಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...