ನವದೆಹಲಿ: ಮಾಜಿ ಪ್ರಧಾನಿ ಮತ್ತು ಜನತಾದಳ(ಜಾತ್ಯತೀತ) ಮುಖ್ಯಸ್ಥ ಹೆಚ್.ಡಿ. ದೇವೇಗೌಡ ಮತ್ತು ಅವರ ಪುತ್ರ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.
2024 ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕುರಿತು ಚರ್ಚಿಸಲು ಸಭೆ ನಡೆಸಲಾಯಿತು. ಸಾರ್ವತ್ರಿಕ ಚುನಾವಣೆಯ ಸೀಟು ಹಂಚಿಕೆ ಸೂತ್ರಗಳ ಬಗ್ಗೆಯೂ ನಾಯಕರು ಚರ್ಚೆ ನಡೆಸಿದ್ದಾರೆ.
ದೇವೇಗೌಡ ಮತ್ತು ಕುಮಾರಸ್ವಾಮಿ ಇಬ್ಬರೂ ನಾಳೆ ಶುಕ್ರವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಕ್ಕೆ ಜೆಡಿಎಸ್ ಪ್ರವೇಶದ ಔಪಚಾರಿಕ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.