
ಬೆಂಗಳೂರು: ಜ್ವರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಚಳಿ ಮತ್ತು ಮಾಲಿನ್ಯದಿಂದ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಜ್ವರ ಮತ್ತು ಕಫದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನಂತರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಆಗಿದ್ದು, ಪದ್ಮನಾಭನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.