ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸೊರಬ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಧು ಬಂಗಾರಪ್ಪ ಸಚಿವರಾಗಿದ್ದಾರೆ. ಇದರೊಂದಿಗೆ ಬಂಗಾರಪ್ಪ ಕುಟುಂಬದ ಮೂರನೇ ವ್ಯಕ್ತಿಗೆ ಸಚಿವ ಸ್ಥಾನ ದೊರೆತಂತಾಗಿದೆ.
ಈ ಮೂಲಕ ಒಂದೇ ಕುಟುಂಬದ ಮೂವರು ಸಚಿವ ಸ್ಥಾನ ಪಡೆದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬದ ದಾಖಲೆಯನ್ನು ಮಧು ಬಂಗಾರಪ್ಪ ಸರಿಗಟ್ಟಿದ್ದಾರೆ. ದೇವೇಗೌಡರ ಕುಟುಂಬದಲ್ಲಿ ದೇವೇಗೌಡರು ಸಚಿವರಾಗಿ, ಮುಖ್ಯಮಂತ್ರಿ ಆಗಿ, ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಪುತ್ರ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ, ಹೆಚ್.ಡಿ. ರೇವಣ್ಣ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.
ಎಸ್. ಬಂಗಾರಪ್ಪ ಅವರು ಸಚಿವರಾಗಿ, ರಾಜ್ಯದ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿದ್ದಾರೆ. ಅವರ ಹಿರಿಯ ಪುತ್ರ ಕುಮಾರ್ ಬಂಗಾರಪ್ಪ ಎಸ್.ಎಂ. ಕೃಷ್ಣ ಸರ್ಕಾರದಲ್ಲಿ ಸಚಿವರಾಗಿದ್ದರು. ಈಗ ಸಿದ್ದರಾಮಯ್ಯ ಸಂಪುಟದಲ್ಲಿ ಮಧು ಬಂಗಾರಪ್ಪ ಸಚಿವರಾಗಿದ್ದಾರೆ. ಈ ಮೂಲಕ ಒಂದೇ ಕುಟುಂಬದ ಮೂವರಿಗೆ ಮಂತ್ರಿ ಸ್ಥಾನ ಒಲಿದು ಬಂದಂತಾಗಿದೆ.