alex Certify BIG NEWS: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿಯಾಗಿ 25 ವರ್ಷ, ಪಕ್ಷದಿಂದ ಸಾಧನೆಗಳ ಸ್ಮರಣ ಅಭಿಯಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿಯಾಗಿ 25 ವರ್ಷ, ಪಕ್ಷದಿಂದ ಸಾಧನೆಗಳ ಸ್ಮರಣ ಅಭಿಯಾನ

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಜೂನ್ 1ಕ್ಕೆ 25 ವರ್ಷಗಳಾಗಿವೆ.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದಿಂದ ದೇವೇಗೌಡರ ಸಾಧನೆಗಳ ಸ್ಮರಣ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದೇವೇಗೌಡರ ರಾಜಕೀಯ ಜೀವನ, ಸಾಧನೆ ,ದೇಶಕ್ಕೆ ಮತ್ತು ರಾಜ್ಯಕ್ಕೆ ಅವರು ನೀಡಿದ ಕೊಡುಗೆಗಳ ಕುರಿತು ಹಿರಿಯ ರಾಜಕಾರಣಿಗಳು, ಹಿರಿಯ ಪತ್ರಕರ್ತರು ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ಜೂನ್ 1 ರಿಂದ 25 ರವರೆಗೆ ದೇವೇಗೌಡರ ಸ್ಮರಣ ಅಭಿಯಾನ ಕೈಗೊಳ್ಳಲಾಗಿದೆ. ಪ್ರಮುಖರು ದೇವೇಗೌಡರ ಕುರಿತಾಗಿ ವಿಡಿಯೋ ಮೂಲಕ ಮಾತನಾಡಲಿದ್ದು, ಪ್ರತಿದಿನ ಸಂಜೆ 5 ಗಂಟೆಗೆ ಜೆಡಿಎಸ್ ಪಕ್ಷದ ಅಧಿಕೃತ ಫೇಸ್ಬುಕ್ ಪೇಜ್ ಮತ್ತು ಟ್ವಿಟರ್ ಪೇಜ್ ಗಳಲ್ಲಿ ವಿಡಿಯೋ ಪ್ರಸಾರ ಮಾಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...