ಕೊಪ್ಪಳ: ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆ ನೀಡಿರುವುದರಿಂದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಕೊಪ್ಪಳ ಕಾಂಗ್ರೆಸ್ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.
ಕೊಪ್ಪಳ ತಾಲೂಕಿನ ಕುಣಿಕೇರಿಯಲ್ಲಿ ಭಾನುವಾರ ಅಂಚೆ ಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಳೆದ 11 ವರ್ಷಗಳಲ್ಲಿ ಕೊಪ್ಪಳ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕ್ಷೇತ್ರದಲ್ಲಿ ಹದಗೆಟ್ಟ ಎಲ್ಲ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಶೀಘ್ರದಲ್ಲಿಯೇ ನವಲಕಲ್ ಏತ ನೀರಾವರಿ ಯೋಜನೆ ಉದ್ಘಾಟಿಸುತ್ತೇವೆ ಎಂದು ಹೇಳಿದ್ದಾರೆ.
ಗ್ರಾಮದ ಅಭಿವೃದ್ಧಿಗೆ ಅನೇಕ ಯೋಜನೆ ರೂಪಿಸಲಾಗಿದ್ದರೂ ಸರ್ಕಾರದ ಗ್ಯಾರಂಟಿ ಯೋಜನೆಗೆ 54,000 ಕೋಟಿ ರೂಪಾಯಿ ನೀಡಿದ ಕಾರಣ ಅಭಿವೃದ್ಧಿಯಲ್ಲಿ ಸ್ವಲ್ಪ ಕುಂಠಿತವಾಗಿದೆ. ಆದರೆ ಗ್ಯಾರಂಟಿ ಲಾಭ ನೇರವಾಗಿ ಜನರಿಗೆ ತಲುಪುತ್ತಿದೆ. ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರೂ ವಿಳಂಬವಾಗುತ್ತಿದೆ ಎಂದು ಅವರು ಹೇಳಿದ್ದಾರೆ.