ಮಹಾರಾಷ್ಟ್ರ : ಇಂದು ಸಂಜೆ 5 ಗಂಟೆಗೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿಯಾದ ಮಹಾಯುತಿ ನಾಯಕರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಶಾಸಕರ ಬೆಂಬಲದ ಸಹಿ ಇರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದರು.ಈ ವೇಳೆ ಏಕನಾಥ್ ಶಿಂಧೆ, ಅಜಿತ್ ಪವಾರ್ ಮತ್ತಿತರರಿದ್ದರು. ಇಂದು ಸಂಜೆ 5 ಗಂಟೆಗೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಯಿದೆ.
ಮುಂಬೈನ ಆಜಾದ್ ಮೈದಾನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.