ಅಯೋಧ್ಯೆ: ಜನವರಿ 23 ರ ಇಂದಿನಿಂದ ಸಾರ್ವಜನಿಕರಿಗೆ ಅಯೋಧ್ಯೆ ರಾಮಮಂದಿರದ ಬಾಗಿಲುಗಳನ್ನು ತೆರೆಯಲಾಗಿದೆ.
ಸೋಮವಾರ ನಡೆದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಮರುದಿನ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪ್ರತಿದಿನ ಎರಡು ಸ್ಲಾಟ್ಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶವಿದೆ. ಬೆಳಿಗ್ಗೆ 7 ರಿಂದ 11:30 ರವರೆಗೆ ಮತ್ತು ನಂತರ ಮಧ್ಯಾಹ್ನ 2 ರಿಂದ ಸಂಜೆ 7 ಗಂಟೆವರೆಗೆ ದರ್ಶನ ಪಡೆಯಬಹುದಾಗಿದೆ.
ಚಳಿಯ ನಡುವೆಯೂ ದೇವಾಲಯದ ಸಂಕೀರ್ಣದ ಹೊರಗೆ ಅಪಾರ ಸಂಖ್ಯೆಯ ಭಕ್ತರು ಸೇರಿದ್ದು, ದೇವಾಲಯಕ್ಕೆ ಪ್ರವೇಶ ಪಡೆದು ರಾಮ್ ಲಲ್ಲಾನ ದರ್ಶನ ಪಡೆಯಲು ಮತ್ತು ಪ್ರಾರ್ಥನೆ ಸಲ್ಲಿಸಲು 3 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ಮುಂದಿನ ದಿನಗಳಲ್ಲಿ ಲಕ್ಷಾಂತರ ಯಾತ್ರಿಕರು ಮತ್ತು ಪ್ರವಾಸಿಗರನ್ನು ಸೆಳೆಯುವ ನಿರೀಕ್ಷೆ ಇದ್ದು, ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ.