ಬೆಂಗಳೂರು: ಪ್ರಸಕ್ತ 2023ನೇ ಶೈಕ್ಷಣಿಕ ಸಾಲಿನಿಂದ ಪದವಿ, ಸ್ನಾತಕೋತ್ತರ ಪದವಿ ಅಂಕಪಟ್ಟಿಗಳು, ವಿದ್ಯಾರ್ಥಿಗಳ ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆಗಳನ್ನು ನಾಡ್(NAD) ಡಿಜಿ ಲಾಕರ್ ನಲ್ಲಿ ಡಿಜಿಟಲ್ ರೂಪದಲ್ಲಿ ಕಡ್ಡಾಯವಾಗಿ ಸಂಗ್ರಹಿಸಲು ಸರ್ಕಾರ ಆದೇಶಿಸಿದೆ.
ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆಗಳು, ವಿಶ್ವವಿದ್ಯಾಲಯಗಳು, ಶೈಕ್ಷಣಿಕ ಸಂಸ್ಥೆಗಳು ಪ್ರಸಕ್ತ ಸಾಲಿನಿಂದ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಕಡ್ಡಾಯವಾಗಿ ಸಂಗ್ರಹಿಸಬೇಕಿದೆ.
ನಕಲಿ ಅಂಕಪಟ್ಟಿ ಹಾವಳಿ ತಡೆದು ರಾಜ್ಯದ ಉನ್ನತ ಶಿಕ್ಷಣ ವಿದ್ಯಾರ್ಥಿಗಳು ಅಕಾಡೆಮಿ ಬ್ಯಾಂಕ್ ಆಫ್ ಕ್ರೆಡಿಟ್ ನಲ್ಲಿ ನೋಂದಾಯಿಸಿಕೊಳ್ಳಲು, ನೇಮಕಾತಿ ಸಂದರ್ಭದಲ್ಲಿ ಎನ್ಎಡಿ ಡಿಜಿ ಲಾಕರ್ ನಲ್ಲಿ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಬಜೆಟ್ ನಲ್ಲಿ ಘೋಷಿಸಿತ್ತು.
ಅಂತೆಯೇ ದಾಖಲೆಗಳನ್ನು ಉದ್ಯೋಗ ನೇಮಕಾತಿ ಸಂಸ್ಥೆಗಳು ನೇಮಕಾತಿ ಸಮಯದಲ್ಲಿ ದೃಢೀಕೃತವೆಂದು ಪರಿಗಣಿಸಲು ಸರ್ಕಾರ ಸೂಚನೆ ನೀಡಿದೆ.