ಬೆಂಗಳೂರು : ರಾಜ್ಯದ ಪ್ರಮುಖ ಸಾಹಿತಿಗಳಿಗೆ ಬೆದರಿಕೆ ಪ್ರಕರಣಗಳ ಪತ್ತೆಗೆ ಬೆಂಗಳೂರು ಕೇಂದ್ರ ಅಪರಾದ ವಿಭಾಗ (CCB) ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡ ರಚನೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಿರಿಯ ಸಾಹಿತಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಅನಾಮಧೇಯ ಬೆದರಿಕೆ ಪತ್ರದ ಮೂಲ ಶೋಧನೆಗೆ ಸಿಸಿಬಿಗೆ ವಹಿಸಿ ಡಿಜಿಪಿ ಆಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ.
ಸಾಹಿತಿಗಳಾದ ಕುಂ.ವೀರಭದ್ರತಪ್ಪ, ಬಿ.ಎಲ್. ವೇಣು, ಬಂಜಗೆರೆ ಜಯಪ್ರಕಾಶ್, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ ಅವರಿಗೆ ಬೆದರಿಕೆ ಪತ್ರಗಳು ಬಂದಿದ್ದವು. ಈ ಬಗ್ಗೆ ಬೆಂಗಳೂರು ಸೇರಿದಂತೆ ವಿವಿಧೆಡೆ ಪ್ರಕರಣಗಳು ದಾಖಲಾಗಿದ್ದವು.