ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬೆನ್ನಲ್ಲೇ ಬೆಳಗಾವಿಯಲ್ಲಿ ಕರ್ನಾಟಕ ವಿಧಾನಮಂಡಲ ಚಳಿಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಮಹಾಮೇಳಾವ್ ನಡೆಸುತ್ತಿದೆ. ಈ ಎಲ್ಲಾ ಬೆಳವಣಿಗೆ ನಡುವೆಯೇ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ ಕರ್ನಾಟಕಕ್ಕೆ ಬರುವುದಾಗಿ ಪತ್ರ ಬರೆದಿದ್ದಾರೆ.
ಬೆಳಗಾವಿಯಲ್ಲಿ ನಾಳೆ ನಡೆಯಲಿರುವ ಎಂಇಎಸ್ ಮಹಾಮೇಳಾವ್ ಗೆ ಬರುತ್ತಿದ್ದೇನೆ. ಸೂಕ್ತ ಭದ್ರತೆ ಒದಗಿಸುವಂತೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಪತ್ರದ ಜತೆಗೆ ತಮ್ಮ ಪ್ರವಾಸದ ಪಟ್ಟಿಯನ್ನೂ ನೀಡಿದ್ದಾರೆ. ಮಹಾಮೇಳಾವ್ ಗೆ ಅವಕಾಶ ನೀಡದಂತೆ ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ.
ಗಡಿ ವಿವಾದ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಎರಡೂ ರಾಜ್ಯಗಳು ಶಾಂತಿ ಕಾಪಾಡುವಂತೆ ಕೇಂದ್ರ ಗೃಹ ಸಚಿವರು ಸೂಚಿಸಿದ್ದರೂ ಆದಾಗ್ಯೂ ಮಹಾರಾಷ್ಟ್ರ ಸಂಸದರು, ಸಚಿವರು ಕರ್ನಾಟಕಕ್ಕೆ ಭೇಟಿ ನೀಡುವುದಾಗಿ ಹೇಳುತ್ತಿದ್ದಾರೆ, ಇನ್ನೊಂದೆಡೆ ಎಂಇಎಸ್ ಮಹಾಮೇಳಾವ್ ಸಮ್ಮೇಳನಕ್ಕೆ ಮುಂದಾಗಿದೆ. ನಾಳೆ ಒಂದೆಡೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಮತ್ತೊಂದೆಡೆ ಎಂಇಎಸ್ ಮಹಾಮೇಳಾವ್ ಆಯೋಜನೆ ಗಡಿ ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನತೆ ಆರಂಭವಾಗುವ ಸಾಧ್ಯತೆ ಇದ್ದು, ಎಲ್ಲರ ಚಿತ್ತ ಬೆಳಗಾವಿಯತ್ತ ನೆಟ್ಟಿದೆ.