
ಧಾರವಾಡ: ಮುಂಬೈ -ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಕಾರು, ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.