
ಧಾರವಾಡ: ಧಾರವಾಡದ ಎಸ್.ಪಿ. ಕಚೇರಿ ಎದುರು ನಡೆದ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ(82) ಸಾವನ್ನಪ್ಪಿದ್ದಾರೆ.
ರಸ್ತೆ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಶಿವಣ್ಣ ಬೆಲ್ಲದ ಮೃತಪಟ್ಟಿದ್ದಾರೆ. ತಡರಾತ್ರಿ ಧಾರವಾಡದ ಎಸ್ಪಿ ಕಚೇರಿ ಎದುರು ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿವಣ್ಣ ಬೆಲ್ಲದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಬೆಲ್ಲದ ಮೃತಪಟ್ಟಿದ್ದಾರೆನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.