ಧಾರವಾಡ: ಜಿಲ್ಲಾಧಿಕಾರಿಗಳ ನಿವಾಸ ಆವರಣದಲ್ಲಿನ ಶ್ರೀಗಂಧದ ಮರವನ್ನು ಭಾನುವಾರ ತಡರಾತ್ರಿ ಕಳ್ಳತನ ಮಾಡಲಾಗಿದೆ. ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಉಪ್ಪಾರ ಅವರು ತಿಳಿಸಿದ್ದಾರೆ.
ಫೆ.20 ರ ತಡರಾತ್ರಿ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ. ಬೆಳಿಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮರ ಕಡಿದ ಸ್ಥಳ ಪರಿಶೀಲನೆ ಮಾಡಿದ್ದಾರೆ. ಈಗಾಗಲೇ ಅರಣ್ಯ ಇಲಾಖೆಯಿಂದ ಎಫ್.ಐ.ಆರ್. ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದ್ದು, ಶೀಘ್ರದಲ್ಲೇ ಮರ ಕಳ್ಳರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.