ಧಾರವಾಡ: ಮನೆಯಲ್ಲಿ ಮಲಗಿದ್ದವನನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಘಟನೆ ನಡೆದಿದೆ.
ಗಿರೀಶ್ ಕರಡಿಗುಡ್ಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತಿಯ ಕೊಲೆಯನ್ನು ಪತ್ನಿ ಕಣ್ಣಾರೆ ಕಂಡಿದ್ದಾರೆ. ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಯಾವ ಕಾರಣಕ್ಕಾಗಿ ಯಾರು ಕೊಲೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಕೊಲೆ ನಡೆದ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.