ಧಾರವಾಡ: ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಧಾರವಾಡದಲ್ಲಿ ನಡೆದಿದೆ. ಯುವಕನೊಬ್ಬ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಮಕ್ಕಳ ರಕ್ಷಣಾ ಘಟಕದ ವತಿಯಿಂದ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ.
ಕೌನ್ಸಿಲಿಂಗ್ ವೇಳೆಯಲ್ಲಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಗೋಬಿಮಂಚೂರಿ ಮತ್ತು ಎಗ್ರೈಸ್ ಕೊಡಿಸುವುದಾಗಿ ಆಮಿಷವೊಡ್ಡಿ ಆರೋಪಿ ಅತ್ಯಾಚಾರವೆಸಗಿದ್ದಾನೆ. ಕೌನ್ಸೆಲಿಂಗ್ ಬಳಿಕ ಉಪನಗರ ಠಾಣೆ ಪೊಲೀಸರಿಗೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕಮಲಾ ದೂರು ನೀಡಿದ್ದಾರೆ.
ಆರೋಪಿ ಪತ್ತೆ ಹಚ್ಚುವಂತೆ ಮನವಿ ಮಾಡಲಾಗಿದ್ದು, ಧಾರವಾಡ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.