ಧಾರವಾಡ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಬಳಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ.
ಸೌದೆ ತರಲು ತೆರಳಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಯರಗುಪ್ಪಿ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೈಶಾಚಿಕ ಕೃತ್ಯವೆಸಗಿದ ದುಷ್ಕರ್ಮಿಗಳು ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ 35 ವರ್ಷದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.