
ಧಾರವಾಡ: ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು ಮನೆ ಹೊತ್ತಿ ಉರಿದ ಘಟನೆ ಧಾರವಾಡದ ಸಲಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಸಿದ್ದಪ್ಪ ದಾನವ್ವ ಎಂಬುವವರಿಗೆಸೇರಿದ ಮನೆಯಲ್ಲಿ ಸಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದ್ದು, ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕುಟುಂಬದವರು ಮನೆಯಿಂದ ಹೊರಗೋಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.
ಮನೆಯಲ್ಲಿದ್ದ ಸಾಮಗ್ರಿಗಳೆಲ್ಲ ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.