ನವದೆಹಲಿ: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಪ್ರಾದೇಶಿಕ ಭಾಷೆಗಳಲ್ಲಿ ಬಿ.ಟೆಕ್ ಕೋರ್ಸ್ ಗಳನ್ನು ನಡೆಸಲು ಅನುಮೋದನೆ ನೀಡಿದೆ. ಕನ್ನಡ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ ನೀಡುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ ಬಗ್ಗೆ ಮಾಹಿತಿ ನೀಡಿದ್ದು, 11 ಪ್ರಾದೇಶಿಕ ಭಾಷೆಗಳಲ್ಲಿ ಬಿ.ಟೆಕ್ ಶಿಕ್ಷಣ ನೀಡಲಾಗುವುದು ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿಯವರು ಪ್ರಾದೇಶಿಕ ಭಾಷೆಗಳಲ್ಲಿ ಶೈಕ್ಷಣಿಕ ಕೋರ್ಸ್ ಗಳ ಉತ್ತೇಜನಕ್ಕೆ ಪ್ರಧಾನಿ ಮೋದಿ ಬದ್ಧರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.