ನವದೆಹಲಿ: ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸುವ ನೀಟ್ ಪರೀಕ್ಷೆಯನ್ನು ಆನ್ಲೈನ್ ಮಾದರಿಯಲ್ಲಿ ನಡೆಸಲು ಕೇಂದ್ರ ಶಿಕ್ಷಣ ಮತ್ತು ಆರೋಗ್ಯ ಸಚಿವಾಲಯಗಳು ಚರ್ಚೆ ನಡೆಸುತ್ತಿದ್ದು, ಶೀಘ್ರವೇ ಈ ಬಗ್ಗೆ ಅಂತಿಮ ತೀರ್ಮಾನ ಹೊರ ಬೀಳಲಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದು, ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಪರೀಕ್ಷೆ ನೀಟ್ ಅನ್ನು ಆನ್ಲ ಲೈನ್ ಮಾದರಿಯಲ್ಲಿ ನಡೆಸುವ ನಿಟ್ಟಿನಲ್ಲಿ ಎರಡು ಸಭೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
2024ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಆರೋಪಗಳಿಂದ ಭಾರಿ ವಿವಾದ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷಾ ಅಕ್ರಮಗಳಿಗೆ ತೆರೆ ಎಳೆಯಲು ಸರ್ಕಾರ ಮುಂದಾಗಿದ್ದು, ಮುಂದಿನ ವರ್ಷದಿಂದ ಆನ್ಲೈನ್ ಮಾದರಿಯಲ್ಲಿ ನೀಟ್ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.