
ನವದೆಹಲಿ: ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರಿದವರಿಗೆ ಶಿಕ್ಷಣ ಮುಂದುವರೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ.
NIOS ಮೂಲಕ 2ನೇ ತರಗತಿಯ ಶಿಕ್ಷಣ ಪಡೆಯಬಹುದು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಮೂಲಕ ಶಿಕ್ಷಣ ಪಡೆಯಬಹುದು. ಕೇಂದ್ರದ ರಕ್ಷಣಾ ಇಲಾಖೆ ಜೊತೆ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗಿದೆ. ಶಿಕ್ಷಣ ಪೂರೈಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು. ಉದ್ಯೋಗ, ಉನ್ನತ ಶಿಕ್ಷಣದ ಉದ್ದೇಶಕ್ಕೆ ಇದನ್ನು ಬಳಸಿಕೊಳ್ಳಬಹುದು ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.