alex Certify BIG BREAKING: ಅಗ್ನಿಪಥ್ ಯೋಜನೆ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಗ್ನಿಪಥ್ ಯೋಜನೆ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮುಖ್ಯ ಮಾಹಿತಿ

ನವದೆಹಲಿ: ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರಿದವರಿಗೆ ಶಿಕ್ಷಣ ಮುಂದುವರೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ.

NIOS ಮೂಲಕ 2ನೇ ತರಗತಿಯ ಶಿಕ್ಷಣ ಪಡೆಯಬಹುದು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಮೂಲಕ ಶಿಕ್ಷಣ ಪಡೆಯಬಹುದು. ಕೇಂದ್ರದ ರಕ್ಷಣಾ ಇಲಾಖೆ ಜೊತೆ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗಿದೆ. ಶಿಕ್ಷಣ ಪೂರೈಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು. ಉದ್ಯೋಗ, ಉನ್ನತ ಶಿಕ್ಷಣದ ಉದ್ದೇಶಕ್ಕೆ ಇದನ್ನು ಬಳಸಿಕೊಳ್ಳಬಹುದು ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...