
ಬೆಂಗಳೂರು: ಧಾರವಾಡದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಉದ್ಯಮಿ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಮನೆಯಲ್ಲಿ 18 ಕೊಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯು.ಬಿ.ಶೆಟ್ಟಿ ಅಳಿಯನಿಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಯು.ಬಿ.ಶೆಟ್ಟಿ ಅಳಿಯ ಡಾ.ಪುನಿತ್ ಅವರ ಬೆಂಗಳೂರಿನ ನಿವಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ಡಾಲರ್ಸ್ ಕಾಲೋನಿಯ 4ನೇ ಹಂತದಲ್ಲಿರುವ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ನಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಈ ವೇಳೆ ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು, ವಿಚರಣೆಗೆ ಹಾಜರಾಗುವಂತೆ ನೋಟೀಸ್ ನೀಡಿ ಅಧಿಕಾರಿಗಳು ತೆರಳಿದ್ದಾರೆ ಎಂದು ತಿಳಿದುಬಂದಿದೆ.