ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಧ್ರುವನಾರಾಯಣ ಪತ್ನಿ ವೀಣಾ ಅವರಿಗೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದಾರೆ. ರಾಜಕೀಯ ಜೀವನದಲ್ಲಿ ಧ್ರುವನಾರಾಯಣ ಅವರು ಅತ್ಯಂತ ಪ್ರಾಮಾಣಿಕ ವ್ಯಕ್ತಿಯಾಗಿದ್ದರು. ಕಾಂಗ್ರೆಸ್ ಪಕ್ಷ ಅವರ ಸೇವೆಯನ್ನು ಯಾವಾಗಲೂ ಸ್ಮರಿಸುತ್ತದೆ. ಧ್ರುವನಾರಾಯಣ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.