ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಆತ್ಮೀಯ ಸ್ನೇಹಿತನ ನಿಧನದ ವಿಚಾರ ತಿಳಿದು ತುಂಬಾ ನೋವಾಗಿದೆ. ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ, ರಾಜ್ಯದ ಅಭಿವೃದ್ಧಿಯ ಬಗ್ಗೆ ಧ್ರುವನಾರಾಯಣ್ ಕಾಳಜಿ ಹೊಂದಿದ್ದರು. ಧ್ರುವನಾರಾಯಣ ತುಂಬಾ ಕ್ರಿಯಾಶೀಲರಾಗಿದ್ದರು. ಜನಪದ ಕಾಳಜಿ ಹೊಂದಿದ್ದ ಉತ್ತಮ ರಾಜಕಾರಣಿಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.
ಪೊಲೀಸ್ ಗೌರವದೊಂದಿಗೆ ಧ್ರುವನಾರಾಯಣ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ.